⚡ಟ್ರೆಂಡಿಂಗ್ಸ್

ಗಜೇಂದ್ರಗಡದಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಗಜೇಂದ್ರಗಡದಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಗದಗವಾಣಿ ಸುದ್ದಿಮೂಲ
ಗಜೇಂದ್ರಗಡ: ಪಟ್ಟಣದ ರಾಜೂರ ರಸ್ತೆಯ ನೂತನ ಪ್ರವಾಸಿ ಮಂದಿರದ ಬಳಿ ಸೋಮವಾರ ಮದ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆತಂಕ ಮೂಡಿಸಿದೆ.

ಲಭ್ಯ ಮಾಹಿತಿಯ ಪ್ರಕಾರ, ಟೆಂಪೋ ಟ್ರಾವೆಲ್ (KA-22 7232) ಮತ್ತು ಗಜೇಂದ್ರಗಡ ಸಮೀಪದ ಗೋಗೇರಿ ಗ್ರಾಮದ ಹದ್ದಣ್ಣವರ ಕುಟುಂಬದ ಅಭಿಷೇಕ, ನವೀನ ಹಾಗೂ ಶೋಭಾ ಗುಮಗೇರಿ  ಬೈಕ್ (KA-51 EQ 3428) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ 34 ವರ್ಷದ ಪುರುಷ ಹಾಗೂ 28 ವರ್ಷದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಟೆಂಪೋ ಟ್ರಾವೆಲ್ ಚಾಲಕ ಹಾಗೂ ಬೈಕ್‌ನ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

ಈ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಸ್ಥಳೀಯರಲ್ಲಿ ಈ ಘಟನೆ ಭಾರೀ ಆಘಾತ ಮೂಡಿಸಿದ್ದು, ವೃತ್ತದಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Post a Comment

Previous Post Next Post
Loading...

Breaking News

ಭ್ರಷ್ಟರ ಬೇಟೆ
ಜಿಲ್ಲಾ ಸುದ್ದಿ is loading...