⚡ಟ್ರೆಂಡಿಂಗ್ಸ್

ಬಾದಾಮಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಬಾದಾಮಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಬಾದಾಮಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಾದಾಮಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಸಡಗರ ಹಾಗೂ ಶಿಸ್ತಿನ ವಾತಾವರಣದಲ್ಲಿ ನಡೆಯಿತು.

ತಾಲೂಕು ಘಟಕದ ವಿವಿಧ ಹುದ್ದೆಗಳಿಗೆ ಒಟ್ಟು 17 ಮಂದಿ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನ ತಂಡದ ಪದಗ್ರಹಣ ಕಾರ್ಯಕ್ರಮ ಗಮನ ಸೆಳೆಯಿತು. ಸಂಘದ ಅಧ್ಯಕ್ಷರಾಗಿ ಎಂ.ಸಿ. ಜುಮ್ಮಣ್ಣವರ್, ಪ್ರಧಾನ ಕಾರ್ಯದರ್ಶಿಯಾಗಿ ಎ.ಎಸ್. ಕಳಕಾಪುರ್, ಉಪಾಧ್ಯಕ್ಷರಾಗಿ ವಿ.ಡಿ. ವೈಕುಂಠ, ಮಹಿಳಾ ಉಪಾಧ್ಯಕ್ಷರಾಗಿ ಜೆ.ಎಂ. ಬದಾಮಿ, ಖಜಾಂಚಿಯಾಗಿ ಸಿ.ಎಸ್. ಅರ್ಸಿಕೆರೆ, ಸಹಾಯಕ ಕಾರ್ಯದರ್ಶಿಯಾಗಿ ಎಚ್.ಎಚ್. ಕೋಣಿ ಪದಗ್ರಹಣ ಸ್ವೀಕರಿಸಿದರು.

ಇದಲ್ಲದೆ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಅಶ್ವಿನಿ ಅಂಗಡಿ ಹಾಗೂ ಬಿ.ವೈ. ಗಚ್ಛನ್ನವರ್, ಮಹಿಳಾ ಸಹಾಯಕ ಕಾರ್ಯದರ್ಶಿಯಾಗಿ ಶ್ರೀಮತಿ ಎಂ.ಬಿ. ಹೂಗಾರ್ ಅಧಿಕಾರ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೇಟ್ಲುರ ಅವರು ಭಾಗವಹಿಸಿ, ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಶಿಕ್ಷಕರ ಹಕ್ಕುಗಳ ರಕ್ಷಣೆ, ಶಿಕ್ಷಣದ ಗುಣಮಟ್ಟ ವೃದ್ಧಿ ಹಾಗೂ ಸಂಘಟನೆಯ ಬಲವರ್ಧನೆಗೆ ಹೊಸ ತಂಡ ಸಮರ್ಪಿತವಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಿಕ್ಷಕರು, ಸಂಘದ ಹಿರಿಯ ಪದಾಧಿಕಾರಿಗಳು ಹಾಗೂ ವಿವಿಧ ಶಾಲೆಗಳ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Post a Comment

أحدث أقدم
Loading...

Breaking News

ಭ್ರಷ್ಟರ ಬೇಟೆ
ಜಿಲ್ಲಾ ಸುದ್ದಿ is loading...