ಡಿ.ಜಿ. ಹಾಗೂ ಐಜಿಪಿ ಶ್ಲಾಘನಾ ಚಿನ್ನದ ಪದಕಕ್ಕೆ ಬೆಟಗೇರಿ ಬಡಾವಣೆ ಪಿಎಸ್‌ಐ ಮಾರುತಿ ಜೋಗದಂಡಕರ್ ಆಯ್ಕೆ..

ಡಿ.ಜಿ. ಹಾಗೂ ಐಜಿಪಿ ಶ್ಲಾಘನಾ ಚಿನ್ನದ ಪದಕಕ್ಕೆ ಬೆಟಗೇರಿ ಬಡಾವಣೆ ಪಿಎಸ್‌ಐ ಮಾರುತಿ ಜೋಗದಂಡಕರ್ ಆಯ್ಕೆ

ಗದಗ : ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆ ಹಾಗೂ ಶ್ಲಾಘನೀಯ ಕಾರ್ಯವನ್ನು ಪರಿಗಣಿಸಿ ನೀಡಲಾಗುವ ಪ್ರತಿಷ್ಠಿತ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು (ಡಿ.ಜಿ. & ಐ.ಜಿ.ಪಿ) ಅವರ‌ ಶ್ಲಾಘನಾ ಚಿನ್ನದ ಪದಕಕ್ಕೆ ಗದಗ್ ಜಿಲ್ಲೆಯ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್‌ಐ ಮಾರುತಿ ಜೋಗದಂಡಕರ್ ಅವರು ಆಯ್ಕೆಯಾಗಿದ್ದಾರೆ.

ತಮ್ಮ ಸೇವಾ ಅವಧಿಯಲ್ಲಿ ಹಲವು ಸಂಕೀರ್ಣ ಹಾಗೂ ಸವಾಲಿನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಮಾರುತಿ ಅವರು ಇಲಾಖೆಯಲ್ಲಿ ಕರ್ತವ್ಯನಿಷ್ಠ ಹಾಗೂ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನೀಡಿದ ಮಹತ್ವದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಈ ಗೌರವ ಲಭಿಸಿದೆ.

ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಅವರ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಗುರುತಿಸಿ ಭಾರತ ಸರ್ಕಾರದಿಂದ ರಾಷ್ಟ್ರಪತಿಗಳ ಪದಕ ನೀಡಿ ಸನ್ಮಾನಿಸಲಾಗಿತ್ತು. ಪೊಲೀಸ್ ಸೇವೆಯ ಜೊತೆಗೆ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡುತ್ತ ಬಂದಿರುತ್ತಾರೆ. ಇವರ ಅವಧಿಯಲ್ಲಿ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ಗದಗ್ ಜಿಲ್ಲೆಯಲ್ಲಿಯೇ ಅತ್ಯುತ್ತಮ ಪೊಲೀಸ್ ಠಾಣೆಯಾಗಿ ಪರಿವರ್ತನೆ ಆಗಿ ಜನ ಸ್ನೇಹಿ ಪೊಲೀಸ್ ಠಾಣೆಯಾಗಿ ಇಲ್ಲಿಯ ಎಲ್ಲ ಅಧಿಕಾರಿಗಳು ಸಿಬ್ಬಂದಿ ವರ್ಗ ದವರು ಇವರಿಗೆ ಸಾಥ್ ಕೊಟ್ಟು ಉತ್ತಮವಾದ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಅವರೆಲ್ಲರ ಕರ್ತವ್ಯವನ್ನು ಪಿ ಎಸ್ ಐ ರವರು ಸ್ಮರಿಸುತ್ತಾರೆ. 

ಪ್ರತಿಷ್ಠಿತ ಡಿ.ಜಿ. ಹಾಗೂ ಐ.ಜಿ.ಪಿ ಚಿನ್ನದ ಪದಕಕ್ಕೆ ಆಯ್ಕೆಯಾಗಿರುವ ಪಿಎಸ್‌ಐ ಮಾರುತಿ ಜೋಗದಂಡಕರ್ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ್ ಸಜ್ಜನ್ ಗದಗ್ ಡಿವೈಎಸ್ಪಿ ಮುರ್ತುಜಾ ಖಾದ್ರಿ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

Post a Comment

أحدث أقدم
Loading...

Breaking News

ಭ್ರಷ್ಟರ ಬೇಟೆ
ಜಿಲ್ಲಾ ಸುದ್ದಿ is loading...