⚡ಟ್ರೆಂಡಿಂಗ್ಸ್

ಸಚಿವರಾದ ಬಳಿಕ ಮೊದಲ ಬಾರಿಗೆ ಗದಗ ಜಿಲ್ಲೆಗೆ ಬಸವರಾಜ್ ರಾಯರೆಡ್ಡಿ: ಬರ ಪರಿಸ್ಥಿತಿಯ ಕುರಿತ ಸಭೆ, ಸಭೆಯಲ್ಲಿ ಅಧಿಕಾರಿಗಳಿಗೆ ತರಾಟೆ,

ಸಚಿವರಾದ ಬಳಿಕ ಮೊದಲ ಬಾರಿಗೆ ಗದಗ ಜಿಲ್ಲೆಗೆ ಬಸವರಾಜ್ ರಾಯರೆಡ್ಡಿ: ಬರ ಅಧ್ಯಯನ ಸಭೆಯಲ್ಲಿ ಅಧಿಕಾರಿಗಳಿಗೆ ತರಾಟೆ


ಗದಗವಾಣಿ ಸುದ್ದಿಮೂಲ

ಗದಗ, ಆ.7: ಸಚಿವರಾದ ಬಳಿಕ ಮೊದಲ ಬಾರಿಗೆ ಗದಗ ಜಿಲ್ಲೆಗೆ ಭೇಟಿ ನೀಡಿದ ಕೃಷಿ ಸಚಿವ ಬಸವರಾಜ್ ರಾಯರೆಡ್ಡಿ ಅವರು ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಬರ ಪರಿಸ್ಥಿತಿ, ಬೆಳೆ ಹಾನಿ ಹಾಗೂ ರೈತರ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಅಪೂರ್ಣ ಹಾಗೂ ತಪ್ಪು ಮಾಹಿತಿಯನ್ನು ನೀಡಿದ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ವಿಶೇಷವಾಗಿ ಹತ್ತಿ ಬೆಳೆ ಹಾಗೂ ಇತರೆ ವಾಣಿಜ್ಯ ಬೆಳೆಗಳ ಕುರಿತು ಸಮರ್ಪಕ ಮಾಹಿತಿ ನೀಡಲು ಅಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ ಸಚಿವರು ತರಾಟೆಗೆ ತೆಗೆದುಕೊಂಡರು. "ನನಗೆ ತಪ್ಪು ಮಾಹಿತಿ ನೀಡಬೇಡಿ. ನಿಮ್ಮ ಉತ್ತರ ತೃಪ್ತಿದಾಯಕವಾಗಿಲ್ಲ," ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ತೋಟಗಾರಿಕೆ ಬೆಳೆಗಳ ಕಾಲಂನಲ್ಲಿ ಹತ್ತಿ ಸೇರಿದಂತೆ ಇತರೆ ಬೆಳೆಗಳನ್ನು ನಮೂದಿಸಿರುವ ಬಗ್ಗೆ ಸಚಿವರು ಪ್ರಶ್ನಿಸಿದಾಗ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳ ವಿವರ ನೀಡುವಲ್ಲಿ ಅಧಿಕಾರಿಗಳು ತಬ್ಬಿಬ್ಬಾದರು. ಈ ಹಿನ್ನೆಲೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ್ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ವಿರುದ್ಧ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾಜಿ ಸಚಿವ ಹಾಗೂ ಗದಗ ಶಾಸಕ ಹೆಚ್.ಕೆ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

Previous Post Next Post
Loading...

Breaking News

ಭ್ರಷ್ಟರ ಬೇಟೆ
ಜಿಲ್ಲಾ ಸುದ್ದಿ is loading...