⚡ಟ್ರೆಂಡಿಂಗ್ಸ್

ಟಿಪ್ಪರ್ ಬೈಕ್ ಡಿಕ್ಕಿ: ಇಬ್ಬರು ಸಾವುರೋಣ ತಾಲೂಕಿನ ಇಟಗಿ ಗ್ರಾಸ್ ಬಳಿ ಭೀಕರ ಅಪಘಾತ



ಟಿಪ್ಪರ್ ಬೈಕ್ ಡಿಕ್ಕಿ: ಇಬ್ಬರು ಸಾವು
ರೋಣ ತಾಲೂಕಿನ ಇಟಗಿ ಗ್ರಾಸ್ ಬಳಿ ಭೀಕರ ಅಪಘಾತ..

ಗದಗವಾಣಿ ಸುದ್ದಿಮೂಲ
ರೋಣ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಇಟಗಿ ಗ್ರಾಸ್ ಬಳಿ ನಡೆದಿದೆ.

ಮೃತರನ್ನು ಹೊಸಳ್ಳಿ ಗ್ರಾಮದ ಶರಣಪ್ಪ ಜಾಲಿಹಾಳ (65) ಹಾಗೂ ಸುರೇಶ್ ತಳವಾರ (59) ಎಂದು ಗುರುತಿಸಲಾಗಿದೆ.

ಮಂಗಳವಾರ ಈ ದುರ್ಘಟನೆ ಸಂಭವಿಸಿದ್ದು, ರೋಣದಿಂದ ಗಜೇಂದ್ರಗಡದ ಕಡೆಗೆ ಟಿಪ್ಪರ್ ತೆರಳುತ್ತಿತ್ತು. ಇದೇ ವೇಳೆ ಇಟಗಿಯಿಂದ ಹೊಸಳ್ಳಿ ಗ್ರಾಮದ ಕಡೆಗೆ ಬೈಕ್‌ನಲ್ಲಿ ಶರಣಪ್ಪ ಜಾಲಿಹಾಳ ಹಾಗೂ ಸುರೇಶ್ ತಳವಾರ ತೆರಳುತ್ತಿದ್ದರು. ಇಟಗಿ ಗ್ರಾಸ್ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಗುಂಡಿಗೆ ವಾಲಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ರೋಣ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಸ್ಥಳದಲ್ಲಿ ವಾಹನಗಳ ಸ್ಥಿತಿ ಹಾಗೂ ಘಟನೆಗೆ ಕಾರಣವಾದ ಅಂಶಗಳ ಕುರಿತು ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.

ಈ ಘಟನೆ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇಬ್ಬರ ಸಾವಿನಿಂದ ಹೊಸಳ್ಳಿ ಗ್ರಾಮದಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಆಘಾತದ ವಾತಾವರಣ ನಿರ್ಮಾಣವಾಗಿದೆ.

Post a Comment

أحدث أقدم
Loading...

Breaking News

ಭ್ರಷ್ಟರ ಬೇಟೆ
ಜಿಲ್ಲಾ ಸುದ್ದಿ is loading...