ಬರ ಪರಿಸ್ಥಿತಿ ಅವಲೋಕನ ನಡೆಸಿದ ಮುಖ್ಯಂಮತ್ರಿ ಡಿ.ಕೆ. ಶಿವಕುಮಾರ
ಮುಂಡರಗಿ,ಗದಗ ತಾಲೂಕಿನ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ಪರಿಶೀಲನೆ
----------------------------------------------------------
ಗದಗ ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾತ ಅವರು ಸೆ.1(ಮಂಗಳವಾರ) ಗದಗ ಹಾಗೂ ಮುಂಡರಗಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಅವಲೋಕಿಸಿದರು.
ಮುಂಡರಗಿ ತಾಲೂಕಿನ ಕದಾಂಪೂರ
ಗ್ರಾಮದ ಸ.ನಂ 437/5 ಶಂಕರಪ್ಪ ಗಾವರವಾಡ ಅವರ ಜಮೀನಿನ ಸೂರ್ಯಕಾಂತಿ, ಸ.ನಂ 434/2ಎ ಸುನೀತಾ ಈರಪ್ಪ ಪೂಜಾರ ಅವರ ಜಮೀನಿನ ಮೆಕ್ಕೆಜೋಳ, ಸ.ನಂ.434/1ಎ ಕಲ್ಲಪ್ಪ ಕಾಡಾಪ್ಪಗೋಳ ಅವರ ಜಮೀನಿನ ಹತ್ತಿ ಬೆಳೆಗಳನ್ನು ಪರಿಶೀಲಿಸಿದರು. ತದನಂತರ ಗದಗ ತಾಲೂಕಿನ ಕುರ್ತಕೋಟಿ ಗ್ರಾಮದ ಸ.ನಂ 303 ಶ್ರೀನಾಥ್ ಮಾರ್ತಾಂಡಗೌಡ ಅವರ ಜಮೀನಿನಲ್ಲಿನ ಶೇಂಗಾ,ಹತ್ತಿ, ಮೆಣಸಿನಕಾಯಿ ಬೆಳೆ ಹುಲಕೋಟೊ ಗ್ರಾಮದ ಸ.ನಂ154/12 ಹನುಂತಪ್ಪ ಸೋಗಿನ ಅವರ ಜಮೀನಿನಲ್ಕಿನ ಮೆಕ್ಕೆಜೋಳವನ್ನು ಪರಿಶೀಲಿಸಿ ಸ್ಥಳೀಯ ರೈತರೊಂದಿಗೆ ಚರ್ಚೆ ನಡೆಸಿದರು.
ಈ ಬಾರಿ ಬರ ಪರಿಸ್ಥಿತಿಯಿಂದ ಬೆಳೆಗಳು ಹಾಳಾಗಿವೆ. ಗದಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರದಿಂದ ತತ್ತರಿಸಿವೆ. ಹೀಗಾಗಿ ಬಾಕಿ ಇರುವ ಜಿಲ್ಲೆಯ ಆರು ತಾಲ್ಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡುವಂತೆ ರೈತರು ಮನವಿ ಮಾಡಿದರು.
ರೈತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, "ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಮತ್ತಷ್ಟು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ. ಪರಿಸ್ಥಿತಿ ಅಧ್ಯಯನ ಬಳಿಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಬರ ತಾಲ್ಲೂಕು ಘೋಷಣೆ ಮಾಡಲಾಗುವುದು" ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರಡ್ಡಿ, ಶಾಸಕರುಗಳಾದ ಎಚ್.ಕೆ.ಪಾಟೀಲ, ಸಿ.ಸಿ.ಪಾಟೀಲ, ಎನ್.ಎನ್.ಕೋನರಡ್ಡಿ, ಪ್ರಾದೇಶಿಕ ಆಯುಕ್ತರಾದ ಜಾನಕಿ ಎಸ್., ಐಜಿಪಿ ಸಂದೀಪ್ ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿತುನ್ ಎಚ್.ಎನ್., ಡಿಸಿಎಫ್ ಸಂತೋಷ ಕುಮಾರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Post a Comment